CBI Recruitment : ರೂ ₹1,05,280/- ಪದವೀದರರಿಗೆ ಸುವರ್ಣಾವಕಾಶ! ಸೆಂಟ್ರಲ್ ಬ್ಯಾಂಕ್‌ನಲ್ಲಿ 350 ಅಧಿಕಾರಿ ಹುದ್ದೆಗಳ ನೇಮಕಾತಿ!

January 23, 2026 8:07 AM
CBI Recruitment

Join WhatsApp

Join Now

Join Telegram

Join Now

ಪದವಿ ಮುಗಿಸಿ ಉದ್ಯೋಗವಿಲ್ಲದೆ ಖಾಲಿ ಕುಳಿತಿದ್ದೀರಾ? ಹಾಗಿದ್ದರೆ ಇಲ್ಲಿದೆ ಭರ್ಜರಿ ಸಿಹಿಸುದ್ದಿ. ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ 2026 ವಿದೇಶಿ ವಿನಿಮಯ ಅಧಿಕಾರಿ ಹಾಗೂ ಮಾರುಕಟ್ಟೆ ಅಧಿಕಾರಿಗಳ ಹುದ್ದೆಗೆ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದ್ದು, ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

CBI Recruitment 2026 In Kannada

ವಿದೇಶಿ ವಿನಿಮಯ ಅಧಿಕಾರಿ ಹಾಗೂ ಮಾರುಕಟ್ಟೆ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸವ ಪ್ರಕ್ರಿಯೆ ಇಂದಿನಿಂದಲೇ ಆರಂಭಗೊಂಡಿದ್ದು, ಅಂದರೆ 20-01-2026 ರಿಂದ 03-02-2026 ರ ವರೆಗೆ ಅವಕಾಶವಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ.


ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ಹುದ್ದೆಗೆ ಸಂಬಂಧಿಸಿದ ಶೈಕ್ಷಣಿಕ ಅರ್ಹತೆ, ಅರ್ಜಿ ಶುಲ್ಕ, ವಯೋಮಿತಿ, ಅರ್ಜಿ ಸಲ್ಲಿಸುವ ವಿಧಾನ ಈ ಎಲ್ಲಾ ಮಾಹಿತಿಯನ್ನು ಹಂತ-ಹಂತವಾಗಿ ನೀಡಿದ್ದು, ಈ ಎಲ್ಲಾ ಮಾಹಿತಿಯನ್ನು ಸಂಪೂರ್ಣವಾಗಿ ಓದಿಕೊಂಡು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ. ಇದೇ ರೀತಿಯ ಇನ್ನಷ್ಟು ಹುದ್ದೆಗಳ ಬಗ್ಗೆ ಮಾಹಿತಿ ಬೇಕಿದ್ದಲ್ಲಿ ನಮ್ಮ ವೆಬ್ಸೈಟ್ ಮಾಧ್ಯಮ.ನೆಟ್ ಗೆ ಭೇಟಿ ನೀಡಿ.

ಹುದ್ದೆಗಳ ಅವಲೋಕನ:

ಸಂಸ್ಥೆಯ ಹೆಸರುಭಾರತೀಯ ಸೆಂಟ್ರಲ್ ಬ್ಯಾಂಕ್
ಹುದ್ದೆಯ ಹೆಸರುವಿದೇಶಿ ವಿನಿಮಯ ಅಧಿಕಾರಿ ಹಾಗೂ ಮಾರುಕಟ್ಟೆ ಅಧಿಕಾರಿ
ಒಟ್ಟು ಹುದ್ದೆಗಳು350 ಹುದ್ದೆಗಳು
ಅರ್ಹತೆಪದವಿ ಮತ್ತು ಎಂಬಿಎ
ಅರ್ಜಿ ಸಲ್ಲಿಸುವ ಪ್ರಾರಂಭಿಕ ದಿನಾಂಕ 20-01-2026
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ03-02-2026
ಅರ್ಜಿ ಸಲ್ಲಿಸುವ ವಿಧಾನ ಆನ್ಲೈನ್

ಹುದ್ದೆಯ ಕುರಿತು ಸಂಕ್ಷಿಪ್ತ ಮಾಹಿತಿ:

ಭಾರತೀಯ ಸೆಂಟ್ರಲ್ ಬ್ಯಾಂಕ್ ಒಟ್ಟು 350 ವಿದೇಶಿ ವಿನಿಮಯ ಅಧಿಕಾರಿ ಹಾಗೂ ಮಾರುಕಟ್ಟೆ ಅಧಿಕಾರಿ ಹುದ್ದೆಗಳ ನೇಮಕಾತಿಗೆ ಅಧಿಸೂಚನೆಯನ್ನು ಹೊರಡಿಸಿದ್ದು, ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 22 ರಿಂದ 35 ವರ್ಷ ವಯೋಮಿತಿಯನ್ನು ಹೊಂದಿರುವುದು ಕಡ್ಡಾಯವಾಗಿದೆ. ವಿದೇಶಿ ವಿನಿಮಯ ಅಧಿಕಾರಿ ಹಾಗೂ ಮಾರುಕಟ್ಟೆ ಅಧಿಕಾರಿ ಹುದ್ದೆಗಳಿಗೆ ಎಷ್ಟೆಷ್ಟು ಹುದ್ದೆಗಳು ಖಾಲಿ ಇದೆ ಅನ್ನುವುದರ ಸಂಪೂರ್ಣ ಮಾಹಿತಿ ಈ ಕೆಳಗಿನ ಹಂತದಲ್ಲಿ ನೀಡಲಾಗಿದೆ.

ಹುದ್ದೆಯ ವಿವರಣೆ:

ಹುದ್ದೆಯ ಹೆಸರುಒಟ್ಟು ಹುದ್ದೆಗಳು
ವಿದೇಶಿ ವಿನಿಮಯ ಅಧಿಕಾರಿ 50 ಹುದ್ದೆಗಳು
ಮಾರುಕಟ್ಟೆ ಅಧಿಕಾರಿ 300 ಹುದ್ದೆಗಳು

ವಿದ್ಯಾರ್ಹತೆ ವಿವರ:

  • ವಿದೇಶಿ ವಿನಿಮಯ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸಿಎ, ಸಿಎಸ್ಎಫ್, ಪದವಿ, ಎಂಬಿಎ ಪೂರ್ಣಗಳಿಸಿರಬೇಕು ಜೊತೆಗೆ ಬ್ಯಾಂಕಿಂಗ್ ಅಥವಾ ಹಣಕಾಸಿನ ಸಂಸ್ಥೆಯಲ್ಲಿ ವಿದೇಶಿ ವಿನಿಮಯ ವಿಭಾಗದಲ್ಲಿ 3 ರಿಂದ 5 ವರ್ಷಗಳ ವೃತ್ತಿ ಅನುಭವ ಹೊಂದಿರುವುದು ಕಡ್ಡಾಯವಾಗಿದೆ.
  • ಮಾರುಕಟ್ಟೆ ಅಧಿಕಾರಿ ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪದವಿ, ಎಂಬಿಎ, ಪಿಜಿಡಿಬಿಎ, ಪಿಜಿಡಿಬಿಎಂ, ಪಿಜಿಪಿಎಂ, ಪಿಜಿಡಿಎಂ ಪೂರ್ಣಗಳಿಸಿರಬೇಕು ಜೊತೆಗೆ ಬಿಎಫ್ಎಸ್ಐ ಸಂಸ್ಥೆಯಲ್ಲಿ ಮಾರುಕಟ್ಟೆ ಸಂಸ್ಥೆಯನ್ನು ಒಂದು ವರ್ಷ ವೃತ್ತಿ ಅನುಭವ ಹೊಂದಿರಬೇಕಾಗುತ್ತದೆ.

ವಯೋಮಿತಿ ವಿವರ:

  • ವಿದೇಶಿ ವಿನಿಮಯ ಅಧಿಕಾರಿ ಹುದ್ದೆಗೆ: ಕನಿಷ್ಠ 25 ವರ್ಷ ಹಾಗೂ ಗರಿಷ್ಟ 35 ವರ್ಷ ವಯೋಮಿತಿಯನ್ನು ಹೊಂದಿರಬೇಕು.
  • ಮಾರುಕಟ್ಟೆ ಅಧಿಕಾರಿ ಹುದ್ದೆಗೆ: ಕನಿಷ್ಠ 22 ವರ್ಷ ಹಾಗೂ ಗರಿಷ್ಟ 30 ವರ್ಷ ವಯೋಮಿತಿಯನ್ನು ಹೊಂದಿರಬೇಕು.

ವಯೋಮಿತಿ ಸಡಿಲಿಕೆ:

  • ಒಬಿಸಿ ಅಭ್ಯರ್ಥಿಗಳು: 3 ವರ್ಷಗಳು
  • SC/ST ಹಾಗೂ ಮಾಜಿ ಸೈನಿಕ ಅಭ್ಯರ್ಥಿಗಳು: 5 ವರ್ಷಗಳು
  • ಪಿಡಬ್ಲ್ಯೂಬಿಡಿ (ಸಾಮಾನ್ಯ )ಅಭ್ಯರ್ಥಿಗಳು: 10 ವರ್ಷಗಳು
  • ಪಿಡಬ್ಲ್ಯೂಬಿಡಿ (ಒಬಿಸಿ)ಅಭ್ಯರ್ಥಿಗಳು: 13 ವರ್ಷಗಳು
  • ಪಿಡಬ್ಲ್ಯೂಬಿಡಿ (SC/ST)ಅಭ್ಯರ್ಥಿಗಳು: 15 ವರ್ಷಗಳು

ವೇತನ ಶ್ರೇಣಿ:

  • ವಿದೇಶಿ ವಿನಿಮಯ ಅಧಿಕಾರಿ: ₹85,920 ರಿಂದ ₹1,05,280
  • ಮಾರುಕಟ್ಟೆ ಅಧಿಕಾರಿ: ₹48,480 ದಿಂದ ₹85,920

ಅರ್ಜಿ ಶುಲ್ಕ:

  • SC/ST/ಪಿಡಬ್ಲ್ಯೂಬಿಡಿ/ಮಹಿಳಾ ಅಭ್ಯರ್ಥಿಗಳಿಗೆ: ₹175
  • ಇತರೆ ಎಲ್ಲಾ ಅಭ್ಯರ್ಥಿಗಳು: ₹850

ಆಯ್ಕೆ ಪ್ರಕ್ರಿಯೆ:

  • ಲಿಖಿತ ಪರೀಕ್ಷೆ
  • ವೈಯಕ್ತಿಕ ಸಂದರ್ಶನ

ಅರ್ಜಿ ಸಲ್ಲಿಸುವ ವಿಧಾನ:

  • ಮೊದಲು ಭಾರತೀಯ ಸೆಂಟ್ರಲ್ ಬ್ಯಾಂಕ್ ಅಧಿಕೃತ ವೆಬ್ಸೈಟ್ http://centralbankofindia.co.in/ ಗೆ ಭೇಟಿ ನೀಡಿ.
  • ನಂತರ ನೇಮಕಾತಿ ವಿಭಾಗದ ಮೇಲೆ ಕ್ಲಿಕ್ ಮಾಡಿ ಹೊಸ ನೇಮಕಾತಿ ಆಯ್ಕೆಯನ್ನು ಆರಿಸಿ.
  • ಮೊಬೈಲ್ ಮತ್ತು ಇಮೇಲ್ ಐಡಿ ಬಳಸಿ ಲಾಗಿನ್ ಆಗಿ.
  • ನಂತರ ವೈಯಕ್ತಿಕ ವಿವರಗಳನ್ನು, ಶೈಕ್ಷಣಿಕ ವಿವರಗಳನ್ನು ಭರ್ತಿ ಮಾಡಿ.
  • ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ ಅರ್ಜಿ ಶುಲ್ಕವನ್ನು ಪಾವತಿಸಿ ಸಬ್ಮಿತ್ ಬಟನ್ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಿ
  • ಭವಿಷ್ಯದ ಉಲ್ಲೇಖಕ್ಕಾಗಿ ಅರ್ಜಿ ನಮೂನೆಯನ್ನು ಹಾಗೂ ಅರ್ಜಿ ಶುಲ್ಕ ಪ್ರತಿಯನ್ನು ಪ್ರಿಂಟ್ ತೆಗೆದುಕೊಳ್ಳಿ.

ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ20-01-2026
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 03-02-2026
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ 03-02-2026

ಅರ್ಜಿ ಸಲ್ಲಿಸಲು ಪ್ರಮುಖ ಲಿಂಕುಗಳು :

ಅಧಿಕೃತ ಅಧಿಸೂಚನೆಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ವೆಬ್ಸೈಟ್ ಇಲ್ಲಿ ಕ್ಲಿಕ್ ಮಾಡಿ
ಆನ್ಲೈನ್ ಅರ್ಜಿ ಇಲ್ಲಿ ಕ್ಲಿಕ್ ಮಾಡಿ

ತೀರ್ಮಾನ :

ಭಾರತೀಯ ರಿಸರ್ವ್ ಬ್ಯಾಂಕ್ 2026 ರಲ್ಲಿ 50 ವಿದೇಶಿ ವಿನಿಮಯ ಅಧಿಕಾರಿ ಹುದ್ದೆಗಳಿಗೆ ಹಾಗೂ 300 ಮಾರುಕಟ್ಟೆ ಅಧಿಕಾರಿ ಹುದ್ದೆಗಳ ನೇಮಕಾತಿಗೆ ಅಧಿಸೂಚನೆಯನ್ನು ಹೊರಡಿಸಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಫೆಬ್ರವರಿ 03 ರೊಳಗಾಗಿ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಿ. ಸರ್ಕಾರಿ ಕೆಲಸ ಪಡೆಯಬೇಕೆಂಬ ನಿಮ್ಮ ಕನಸ್ಸನ್ನು ನನಸು ಮಾಡಿಕೊಳ್ಳಿ.


ಇತರೆ ಯೋಜನೆಯ ಲಿಂಕುಗಳು :

Chethana

Hello! I’m Chethana, an economics graduate with a passion for analyzing trends in technology, finance, and global news. With years of experience as a news editor, I bring data-driven insights and simplified explanations to complex topics, tech innovations, or market trends. My goal is to make information accessible and actionable for readers. Stay tuned for well-researched articles that bridge the gap between expertise and everyday understanding!

Join WhatsApp

Join Now

Join Telegram

Join Now

Leave a Comment