
ನಮಸ್ಕಾನ ಸ್ನೇಹಿತರೆ, ನೀವೇನಾದರೂ ವಿಜ್ಞಾನಿ ಆಗುವ ಕನಸ್ಸನ್ನು ಕಾಣುತ್ತಿದ್ದೀರಾ? ಕೇಂದ್ರ ಸರ್ಕಾರದ ಉದ್ಯೋಗವನ್ನು ತಮ್ಮದಾಗಿಸಿಕೊಳ್ಳಬೇಕು ಎನ್ನುವ ನೀರಿಕ್ಷೆಯಲ್ಲಿ ಪದವಿಯನ್ನು ಪೂರ್ಣಗೊಳಿಸಿದ್ದೀರಾ? ಹಾಗಿದ್ದಲ್ಲಿ ನಿಮ್ಮ ಕನಸ್ಸನ್ನು ನನಸು ಮಾಡಿಕೊಳ್ಳಲು ಸುವರ್ಣಾವಕಾಶ ಧಾವಿಸಿ ಬಂದಿದೆ.
CSB Recruitment in kannada
ಹೌದು, ಭಾರತ ಸರ್ಕಾರದ ಕೇಂದ್ರ ರೇಷ್ಮೆ ಮಂಡಳಿಯು 2026 ರ ಸಾಲಿನಲ್ಲಿ 36 ವಿಜ್ಞಾನಿ – ಬಿ ಹುದ್ದೆಗಳ ಭರ್ತಿಗೆ ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದ್ದು, ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಕೇಂದ್ರ ರೇಷ್ಮೆ ಮಂಡಳಿ (CSB) ಯ ವಿಜ್ಞಾನಿ – ಬಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಭಾರತದಾದ್ಯಂತ ಯಾವುದೇ ಸಂಸ್ಥೆ ಅಥವಾ ಕಚೇರಿಯಲ್ಲಿ ಉದ್ಯೋಗ ಮಾಡಲು ಸಿದ್ಧರಿರಬೇಕು. ಅರ್ಹ ಅಭ್ಯರ್ಥಿಗಳಿಗೆ ವಿಜ್ಞಾನಿ – ಬಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮಾರ್ಚ್ 2, 2026 ರಿಂದ 31-03-2026 ರ ವರೆಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ಈ ನೇಮಕಾತಿಗೆ ಸಂಬಂಧಿಸಿದಂತೆ ಯಾರು ಅರ್ಜಿ ಸಲ್ಲಿಸಬಹುದು? ವಯೋಮಿತಿ ಎಷ್ಟು? ಅರ್ಜಿ ಸಲ್ಲಿಸುವುದು ಹೇಗೆ? ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವಾಗ ಹಾಗೂ ಇನ್ನಿತರ ಅಗತ್ಯ ಮಾಹಿತಿಯನ್ನು ಪ್ರಸ್ತುತ ಈ ಒಂದು ಲೇಖನದ ಮೂಲಕ ತಿಳಿದುಕೊಳ್ಳಬಹುದಾಗಿದೆ. ಇದೇ ರೀತಿಯ ಇನ್ನಷ್ಟು ಹುದ್ದೆಗಳ ಕುರಿತು ಮಾಹಿತಿ ಬೇಕಿದ್ದರೆ ನಮ್ಮ ವೆಬ್ಸೈಟ್ ಮಾಧ್ಯಮ.ನೆಟ್ ಗೆ ಭೇಟಿ ನೀಡಿ.
ಹುದ್ದೆಯ ವಿವರಣಾತ್ಮಕ ನೋಟ:
| ನೇಮಕಾತಿ ಸಂಸ್ಥೆ | ಕೇಂದ್ರ ರೇಷ್ಮೆ ಮಂಡಳಿ (CSB) (ಭಾರತ ಸರ್ಕಾರ) |
| ಹುದ್ದೆಯ ಹೆಸರು | ವಿಜ್ಞಾನಿ – ಬಿ |
| ಹುದ್ದೆಯ ಸಂಖ್ಯೆ | ಒಟ್ಟು 36 ಹುದ್ದೆಗಳು |
| ಉದ್ಯೋಗ ಸ್ಥಳ | ಅಖಿಲ ಭಾರತ |
| ವಯಸ್ಸಿಯ ಮಿತಿ | ಅಭ್ಯರ್ಥಿಗಳು ಗರಿಷ್ಟ 35 ವರ್ಷ ವಯೋಮಿತಿಯನ್ನು ಹೊಂದಿರಬೇಕು |
| ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 31-03-2026 |
| ಅಧಿಕೃತ ವೆಬ್ಸೈಟ್ ಲಿಂಕ್ | csb.gov.in/ |
ಹುದ್ದೆಯ ಬಗ್ಗೆ:
ಕೇಂದ್ರ ರೇಷ್ಮೆ ಮಂಡಳಿ (CSB) ಯು 2026 ರ ನೇಮಕಾತಿಯಲ್ಲಿ ಒಟ್ಟು 36 ವಿಜ್ಞಾನಿ – ಬಿ ಹುದ್ದೆಗಳ ಭರ್ತಿಗೆ ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದ್ದು, ರೇಷ್ಮೆ ಕೃಷಿ ವಿಭಾಗ, ಸಸ್ಯ ಶರೀರಶಾಸ್ತ್ರ, ಕೃಷಿ ಶಾಸ್ತ್ರ ಹಾಗೂ ಮಣ್ಣು ವಿಜ್ಞಾನ, ಕೃಷಿ ಅಂಕಿ ಅಂಶ ವಿಭಾಗ ಸೇರಿದಂತೆ ಇನ್ನಿತರ ವಿಭಾಗಗಳಲ್ಲಿ ಅಭ್ಯರ್ಥಿಗಳು ಕಾರ್ಯ ನಿರ್ವಹಿಸಬೇಕಾಗುತ್ತದೆ.
ವಿಜ್ಞಾನಿ – ಬಿ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ವಿಜ್ಞಾನ ವಿಷಯದಲ್ಲಿ ಸ್ನಾತಕೋತ್ತರ ಪದವಿಯನ್ನು ಹೊಂದಿದ್ದು, ಗರಿಷ್ಟ 35 ವರ್ಷ ವಯೋಮಿತಿಯನ್ನು ಹೊಂದಿರಬೇಕಾಗುತ್ತದೆ. ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಅತ್ಯಾಕರ್ಷಕ ವೇತನವನ್ನು ನಿಗದಿಪಡಿಸಲಾಗಿದ್ದು, ಅವುಗಳ ವಿವರ ಈ ಕೆಳಗಿನ ಹಂತದಲ್ಲಿ ತಿಳಿದುಕೊಳ್ಳಬಹುದಾಗಿದೆ.
ಹುದ್ದೆಯ ಸಂಕ್ಷಿಪ್ತ ವಿವರ:
ವಿಜ್ಞಾನಿ – ಬಿ ಹುದ್ದೆಗಳನ್ನು ಅಭ್ಯರ್ಥಿಗಳನ್ನು ಈ ಕೆಳಗೆ ನೀಡಲಾದ ವಿವಿಧ ವಿಭಾಗಗಳ ಅಡಿಯಲ್ಲಿ ಆಯ್ಕೆ ಮಾಡಿಕೊಳ್ಳಲಾಗುತ್ತದೆ ಅವುಗಳೆಂದರೆ,
| ವಿಭಾಗಗಳ ಹೆಸರು | ಹುದ್ದೆಗಳ ಸಂಖ್ಯೆ |
| ರೇಷ್ಮೆ ಕೃಷಿ ವಿಭಾಗ | 18 ಹುದ್ದೆಗಳು |
| ಕೃಷಿ ವ್ಯವಹಾರ ನಿರ್ವಹಣೆ ಹಾಗೂ ವಿಸ್ತರಣೆ ಶಿಕ್ಷಣ | 5 ಹುದ್ದೆಗಳು |
| ಸಸ್ಯ ಶರೀರ ಶಾಸ್ತ್ರ | 4 ಹುದ್ದೆಗಳು |
| ಕೃಷಿ ಶಾಸ್ತ್ರ ಹಾಗೂ ಮಣ್ಣು ವಿಜ್ಞಾನ | 4 ಹುದ್ದೆಗಳು |
| ಸಸ್ಯ ತಳಿ ಶಾಸ್ತ್ರ ಹಾಗೂ ತಳಿ ಅಭಿವೃದ್ಧಿ | 3 ಹುದ್ದೆಗಳು |
| ಸಸ್ಯ ರೋಗ ಶಾಸ್ತ್ರ | 1 ಹುದ್ದೆ |
| ಕೃಷಿ ಅಂಕಿ ಅಂಶ ವಿಭಾಗ | 1 ಹುದ್ದೆ |
ಅಭ್ಯರ್ಥಿಗಳು ಹೊಂದಿರಬೇಕಾದ ಶೈಕ್ಷಣಿಕ ಅರ್ಹತೆಗಳು:
- ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಲ್ಲಿ ವಿಜ್ಞಾನ ವಿಷಯದಲ್ಲಿ ಸ್ನಾತಕೋತ್ತರ ಪದವಿಯನ್ನು ಹೊಂದಿರಬೇಕು.
- ಅಥವಾ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಲ್ಲಿ ಕೃಷಿ ವಿಜ್ಞಾನ ಕ್ಷೇತ್ರದಲ್ಲಿ ಸ್ನಾತಕೋತ್ತರ ಪದವಿಯನ್ನು ಹೊಂದಿರಬೇಕು.
- ಅಭ್ಯರ್ಥಿಗಳು ICAR ಪರೀಕ್ಷೆ 2025 ಪರೀಕ್ಷೆಯನ್ನು ಬರೆದು ಹೆಚ್ಚಿನ ಅಂಕವನ್ನು ಗಳಿಸಿರಬೇಕು.
ವಯೋಮಿತಿ ವಿವರ:
ಕೇಂದ್ರ ರೇಷ್ಮೆ ಮಂಡಳಿಯು ನೇಮಕಾತಿ ಅಧಿಸೂಚನೆ ಹೊರಡಿಸಿದ ವಿಜ್ಞಾನಿ – ಬಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಹೊಂದಿರಬೇಕಾದ ವಯೋಮಿತಿ ಎಷ್ಟಿರಬೇಕು ಎನ್ನುವುದನ್ನು ಈ ಕೆಳಗೆ ನೀಡಲಾಗಿದೆ.
- ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವಂತೆ ಅಭ್ಯರ್ಥಿಗಳು 31 ಮಾರ್ಚ್ 2026 ರಂತೆ ಗರಿಷ್ಟ 35 ವರ್ಷ ವಯೋಮಿತಿಯನ್ನು ಹೊಂದಿರಬೇಕು.
ವಯೋಮಿತಿ ಸಡಿಲಿಕೆ ವಿವರ:
ಸರ್ಕಾರದ ನಿಯಮಗಳ ಅನ್ವಯ ಕೆಲ ವರ್ಗಗಳ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗಿದೆ. ಅವುಗಳ ವಿವರ ಹೀಗಿದೆ.
- ಇತರೆ ಹಿಂದುಳಿದ ವರ್ಗಗಳ (ಒಬಿಸಿ) ಅಭ್ಯರ್ಥಿಗಳಿಗೆ: 3 ವರ್ಷ
- ಪರಿಶಿಷ್ಟ ಜಾತಿ ಮತ್ತು ಪಂಗಡಗಳ (SC / ST)ಅಭ್ಯರ್ಥಿಗಳಿಗೆ: 5 ವರ್ಷ
- PwBD (ಸಾಮಾನ್ಯ) ಅಭ್ಯರ್ಥಿಗಳಿಗೆ: 10 ವರ್ಷ
- PwBD (ಒಬಿಸಿ) ಅಭ್ಯರ್ಥಿಗಳಿಗೆ: 13 ವರ್ಷ
- PwBD (SC / ST) ಅಭ್ಯರ್ಥಿಗಳಿಗೆ: 15 ವರ್ಷ
ಅರ್ಜಿ ಶುಲ್ಕ:
ಕೇಂದ್ರ ರೇಷ್ಮೆ ಮಂಡಳಿಯ ವಿಜ್ಞಾನಿ – ಬಿ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ತಮ್ಮ ವರ್ಗಗಳಿಗೆ ಸಂಬಂಧಿಸಿದಂತೆ ಅರ್ಜಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ.
- ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಅಂಗವಿಕಲ ಹಾಗೂ ಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
- ಸಾಮಾನ್ಯ, ಇತರೆ ಹಿಂದುಳಿದ ವರ್ಗ, ಇ.ಡಬ್ಲ್ಯೂ.ಎಸ್ ಹಾಗೂ ಮಾಜಿ ಸೈನಿಕ ಅಭ್ಯರ್ಥಿಗಳಿಗೆ: ₹1,000/-
ವೇತನ ಶ್ರೇಣಿ:
ಕೇಂದ್ರ ರೇಷ್ಮೆ ಮಂಡಳಿ (CSB)ಯ ವಿಜ್ಞಾನಿ – ಬಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 7 ನೇ ವೇತನ ಆಯೋಗ (CPC) ಲೆವೆಲ್ 10 ರ ಅಡಿಯಲ್ಲಿ ವೇತನವನ್ನು ನಿಗದಿಪಡಿಸಲಾಗಿದೆ.
- ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ₹56,100 ದಿಂದ ₹1,77,500 ವರೆಗೆ ವೇತನವನ್ನು ನೀಡಲಾಗುತ್ತದೆ. ಇವುಗಳ ಜೊತೆಗೆ ತುಟ್ಟಿ ಭತ್ಯೆ, ಮನೆ ಬಾಡಿಗೆಯ ಭತ್ಯೆ ಸೇರಿದಂತೆ ಇನ್ನಿತರ ಭತ್ಯೆಗಳನ್ನು ಪಡೆಯಲು ಅರ್ಹರಾಗಿರುತ್ತಾರೆ.
ಹುದ್ದೆಗೆ ಅರ್ಜಿ ಸಲ್ಲಿಸಲು ಅಗತ್ಯವಾದ ದಾಖಲೆಗಳು:
- ವಯಸ್ಸಿನ ದಾಖಲೆಗಾಗಿ SSLC ಅಂಕಪಟ್ಟಿ
- ಪದವಿ ಪ್ರಮಾಣಪತ್ರ
- ಪದವಿ ಅಂಕಪಟ್ಟಿ
- ಸ್ನಾತಕೋತ್ತರ ಪದವಿ ಅಂಕಪಟ್ಟಿ
- ಅಭ್ಯರ್ಥಿಗಳ ಪಾಸ್ಪೋರ್ಟ್ ಅಳತೆಯ ಫೋಟೋ
- ಅಭ್ಯರ್ಥಿಗಳ ಸಹಿ
- ಜಾತಿ ಪ್ರಮಾಣಪತ್ರ (ಮೀಸಲಾತಿಗಾಗಿ)
- ICAR AICE – JRF / SRF (Ph.D) – 2025 ಸ್ಕೋರ್ ಕಾರ್ಡ್
ಅರ್ಜಿ ಸಲ್ಲಿಸುವ ವಿಧಾನ:
- ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕೇಂದ್ರ ರೇಷ್ಮೆ ಮಂಡಳಿಯ ಅಧಿಕೃತ ವೆಬ್ಸೈಟ್ https://csb.gov.in/ ಗೆ ಭೇಟಿ ನೀಡಿ.
- ಮುಖಪುಟದಲ್ಲಿರುವ ಜಾಬ್ ಅಪರ್ಚುನಿಟಿಸ್ ಲಿಂಕ್ ಮೇಲೆ ಕ್ಲಿಕ್ ಮಾಡಿ.
- ನಂತರ ಇದರ ಅಡಿಯಲ್ಲಿ ಇರುವ ವಿಜ್ಞಾನಿ – ಬಿ ನೇಮಕಾತಿ ವಿಭಾಗವನ್ನು ಆಯ್ಕೆ ಮಾಡಿಕೊಳ್ಳಿ.
- ನಂತರ ಅಪ್ಲಿಕೇಶನ್ ಫಾರ್ಮ್ ನಲ್ಲಿ ಕೇಳಲಾದ ಎಲ್ಲಾ ವೈಯಕ್ತಿಕ ಹಾಗೂ ಶೈಕ್ಷಣಿಕ ವಿವರಗಳನ್ನು ಭರ್ತಿ ಮಾಡಿ.
- ಅಭ್ಯರ್ಥಿಗಳ ಸಹಿ, ಇತ್ತೀಚಿನ ಪಾಸ್ಪೋರ್ಟ್ ಅಳತೆಯ ಭಾವಚಿತ್ರ ಹಾಗೂ ಅಗತ್ಯ ಶೈಕ್ಷಣಿಕ ಪ್ರಮಾಣಪತ್ರವನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ ಅರ್ಜಿ ಸಲ್ಲಿಸಿ.
- ನಂತರ ನಿಮ್ಮ ವರ್ಗಗಳಿಗೆ ಸಂಬಂಧಿಸಿದ ಅರ್ಜಿ ಶುಲ್ಕವನ್ನು ಪಾವತಿಸಿ.
- ಭವಿಷ್ಯದ ಉಲ್ಲೇಖಕ್ಕಾಗಿ ಪೇಮೆಂಟ್ ರಿಸಿಪ್ಟ್ ಹಾಗೂ ಅಪ್ಲಿಕೇಶನ್ ಫಾರ್ಮ್ ನ ಪ್ರಿಂಟ್ ತಗೆದುಕೊಳ್ಳಿ.
ಆಯ್ಕೆವಿಧಾನ :
- ಶಾರ್ಟ್ ಲಿಸ್ಟ್:
ಅಭ್ಯರ್ಥಿಗಳು ICAR ಪರೀಕ್ಷೆಯ ಅಂಕಗಳ ಆಧಾರದ ಮೇಲೆ ಅಭ್ಯರ್ಥಿಗಳ ಶಾರ್ಟ್ ಲಿಸ್ಟ್ ಮಾಡಲಾಗುತ್ತದೆ.
- ವೈಯಕ್ತಿಕ ಸಂದರ್ಶನ:
ಮೆರಿಟ್ ಪಟ್ಟಿಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ವೈಯಕ್ತಿಕ ಸಂದರ್ಶನಕ್ಕೆ ಕರೆಯಲಾಗುತ್ತದೆ.
- ಅಂತಿಮ ಆಯ್ಕೆ:
ಅಭ್ಯರ್ಥಿಗಳು ICAR ಪರೀಕ್ಷೆಯಲ್ಲಿ ಗಳಿಸಿದ ಅಂಕ ಹಾಗೂ ಸಂದರ್ಶನದಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಅಂತಿಮ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
- ದಾಖಲಾತಿ ಪರಿಶೀಲನೆ:
ಅಂತಿಮವಾಗಿ ಆಯ್ಕೆಯಾದ ಅಭ್ಯರ್ಥಿಗಳು ಶೈಕ್ಷಣಿಕ ಪ್ರಮಾಣಪತ್ರ, ಜಾತಿ ಪ್ರಮಾಣಪತ್ರ ಹಾಗೂ ಇತರೆ ದಾಖಲೆಗಳನ್ನು ಸಲ್ಲಿಸಬೇಕಾಗುತ್ತದೆ.
ಪ್ರಮುಖ ದಿನಾಂಕಗಳು:
| ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | 02-03-2026 |
| ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 31-03-2026 |
ಅರ್ಜಿಸಲ್ಲಿಸಲು ಪ್ರಮುಖ ಲಿಂಕುಗಳು:
| ಅಧಿಕೃತ ಅಧಿಸೂಚನೆ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
| ಅಧಿಕೃತ ವೆಬ್ಸೈಟ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
| ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಕೊನೆಯ ಮಾತು:
ಕೇಂದ್ರ ರೇಷ್ಮೆ ಮಂಡಳಿ (CSB) ಯಲ್ಲಿ 36 ವಿಜ್ಞಾನಿ – ಬಿ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದ್ದು, ಕೇಂದ್ರ ರೇಷ್ಮೆ ಮಂಡಳಿಯಲ್ಲಿ ವಿಜ್ಞಾನಿ ಆಗಿ ವೃತ್ತಿ ಜೀವನವನ್ನು ಪ್ರಾರಂಭಿಸಬೇಕು ಎಂದಿರುವವರಿಗೆ ಇದೊಂದು ಸುವರ್ಣಾವಕಾಶವಾಗಿದೆ. ನೀವೇನಾದರೂ ಈ ಹುದ್ದೆಗೆ ಅರ್ಜಿ ಸಲ್ಲಿಸಲು ಆಸಕ್ತಿಯನ್ನು ಹೊಂದಿದ್ದರೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ 31-03-2026 ರೊಳಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ ವಿಜ್ಞಾನಿ ಆಗುವ ನಿಮ್ಮ ಕನಸ್ಸನ್ನು ನನಸ್ಸು ಮಾಡಿಕೊಳ್ಳಿ.
ಪದೇ ಪದೇ ಕೇಳಲಾಗುವ ಪ್ರಶ್ನೆಗಳು:
ಕೇಂದ್ರ ಕೃಷಿ ಮಂಡಳಿ (CSB) ಯಲ್ಲಿ ನೇಮಕಾತಿ ನಡೆಯುತ್ತಿದೆ.
ಕೇಂದ್ರ ರೇಷ್ಮೆ ಮಂಡಳಿ (CSB) ಯಲ್ಲಿ ಒಟ್ಟು 36 ಹುದ್ದೆಗಳು ಖಾಲಿ ಇದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 31-03-2026.
ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಇತರೆ ಪ್ರಮುಖ ಲಿಂಕ್ ಗಳು:
- DRDO: ರೂ. ₹78,800 ವೇತನ, ಭರ್ಜರಿ ನೇಮಕಾತಿ 2026! ಯಾವುದೇ ಅರ್ಜಿ ಶುಲ್ಕವಿಲ್ಲದೆ ಸರ್ಕಾರಿ ಉದ್ಯೋಗಾವಕಾಶ!
- Budget karnataka 2026: ₹4.48 ಲಕ್ಷ ಕೋಟಿ ಬಜೆಟ್: ಸಿ.ಎಮ್ ಸಿದ್ದರಾಮಯ್ಯ ಬಜೆಟ್ನಲ್ಲಿ ಘೋಷಿಸಿದ ಪ್ರಮುಖ ಯೋಜನೆಗಳು ಏನು?
- Swachh Bharat Mission: ಉಚಿತ ಶೌಚಾಲಯ ನಿರ್ಮಾಣಕ್ಕೆ ₹20,000/-ಸಹಾಯಧನ! ಸಂಪೂರ್ಣ ಮಾಹಿತಿ ಇಲ್ಲಿದೆ,
- Sukanya Samriddhi Yojana : 69 ಲಕ್ಷ ಹಣ ಹೆಣ್ಣುಮಕ್ಕಳ ಪಾಲಿನ ಸಂಜೀವಿನಿ!
- 75% ಸಬ್ಸಿಡಿ – ಕರ್ನಾಟಕ ಕೃಷಿ ಅರಣ್ಯ ಪ್ರೋತ್ಸಾಹ ಯೋಜನೆ!






