DC Office Job: ರೂ. 46,675 ವೇತನ! ಕರ್ನಾಟಕ ಜಿಲ್ಲಾಧಿಕಾರಿ ಕಚೇರಿಯಲ್ಲಿ ಭರ್ಜರಿ ಉದ್ಯೋಗಾವಕಾಶ!

March 21, 2026 11:08 AM

ನಮಸ್ಕಾರ ಸ್ನೇಹಿತರೆ, ನೀವೇನಾದರೂ ದಾವಣಗೆರೆಯಲ್ಲಿ ಸರ್ಕಾರಿ ಉದ್ಯೋಗವನ್ನು ಹುಡುಕುತ್ತಿದ್ದೀರಾ? ದಾವಣಗೆರೆ ಜಿಲ್ಲೆಯ ಹರಿಹರ ನಗರಸಭೆಯಲ್ಲಿ ಪೌರಕಾರ್ಮಿಕರಾಗಿ ಸೇವೆ ಸಲ್ಲಿಸುವ ಆಸಕ್ತಿ ಹೊಂದಿದ್ದೀರಾ? ಹಾಗಿದ್ದರೆ ನಿಮಗೊಂದು ಸಂತಸದ ಸುದ್ದಿ!

Join WhatsApp

Join Now

Join Telegram

Join Now

DC Office Job in kannada

ದಾವಣಗೆರೆ ಜಿಲ್ಲೆಯ ಜಿಲ್ಲಾಧಿಕಾರಿಗಳ ಕಾರ್ಯಾಲಯವು ಪೌರಕಾರ್ಮಿಕ ಹುದ್ದೆಗಳ ನೇಮಕಾತಿಗೆ ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದ್ದು, ಈ ಹುದ್ದೆಗೆ ಅಭ್ಯರ್ಥಿಗಳು ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾಗುತ್ತದೆ. ನೀವೇನಾದರೂ ಈ ಒಂದು ಹುದ್ದೆಗೆ ಅರ್ಜಿ ಸಲ್ಲಿಸಲು ಆಸಕ್ತಿಯನ್ನು ಹೊಂದಿದ್ದರೆ, 10-04-2026 ರ ಒಳಗೆ ಹರಿಹರ ನಗರಸಭೆ ಕಚೇರಿಗೆ ಭೇಟಿ ನೀಡಿ ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾಗುತ್ತದೆ.

ಪೌರಕಾರ್ಮಿಕ ಹುದ್ದೆಯನ್ನು ಮೀಸಲಾತಿ ಅನ್ವಯ ಹಂಚಿಕೆ ಮಾಡಲಾಗಿದ್ದು, ಯಾವ ವರ್ಗಗಳ ಅಭ್ಯರ್ಥಿಗಳಿಗೆ ಎಷ್ಟೆಷ್ಟು ಹುದ್ದೆಗಳನ್ನು ಮೀಸಲಿಡಲಾಗಿದೆ? ಹುದ್ದೆಗೆ ಅಭ್ಯರ್ಥಿಗಳು ಹೊಂದಿರಬೇಕಾದ ವಯೋಮಿತಿ ಎಷ್ಟು? ಹುದ್ದೆಗೆ ಸಂಬಂಧಿಸಿದ ವಯೋಮಿತಿ ಎಷ್ಟು? ಎನ್ನುವ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಒಂದು ಲೇಖನದ ಮೂಲಕ ತಿಳಿದುಕೊಳ್ಳಬಹುದಾಗಿದೆ.

DC Office Job

ಇದೇ ರೀತಿಯ ಇನ್ನಷ್ಟು ಹುದ್ದೆಗೆ ಸಂಬಂಧಿಸಿದ ಹೊಸ ಹೊಸ ಅಪ್ಡೇಟ್ ಗಳಿಗಾಗಿ ನಮ್ಮ ವೆಬ್ಸೈಟ್ ಮಾಧ್ಯಮ.ನೆಟ್ ಗೆ ಭೇಟಿ ನೀಡಿ.


ಹುದ್ದೆಯ ಕಿರು ಪರಿಚಯ:

ನೇಮಕಾತಿ ಇಲಾಖೆ ಜಿಲ್ಲಾಧಿಕಾರಿಗಳ ಕಾರ್ಯಾಲಯ (ಜಿಲ್ಲಾ ನಗರಾಭಿವೃದ್ಧಿ ಕೋಶ) ದಾವಣಗೆರೆ ಜಿಲ್ಲೆ (DC Office Job)
ಹುದ್ದೆಯ ಹೆಸರು ಪೌರಕಾರ್ಮಿಕ ಹುದ್ದೆ
ಹುದ್ದೆಗಳ ಸಂಖ್ಯೆ ಒಟ್ಟು 04 ಹುದ್ದೆಗಳು
ಉದ್ಯೋಗ ಸ್ಥಳ ಹರಿಹರ ನಗರಸಭೆ, ದಾವಣಗೆರೆ ಜಿಲ್ಲೆ
ಅರ್ಜಿ ಸಲ್ಲಿಸುವ ವಿಧಾನ ಆಫ್ಲೈನ್
DC Office Job

ಹುದ್ದೆಯ ಕಿರು ಪರಿಚಯ:

ಜಿಲ್ಲಾಧಿಕಾರಿಗಳ ಕಾರ್ಯಾಲಯ (ಜಿಲ್ಲಾ ನಗರಾಭಿವೃದ್ಧಿ ಕೋಶ) ದಾವಣಗೆರೆಯು ಒಟ್ಟು 04 ಪೌರಕಾರ್ಮಿಕ ಹುದ್ದೆಗಳ ಭರ್ತಿಗೆ ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದ್ದು, ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷದಿಂದ ಗರಿಷ್ಟ 55 ವರ್ಷ ವಯೋಮಿತಿಯನ್ನು ಹೊಂದಿರಬೇಕು. ಅಭ್ಯರ್ಥಿಗಳು ಯಾವುದೇ ಶೈಕ್ಷಣಿಕ ಅರ್ಹತೆಯನ್ನು ಹೊಂದಿರುವ ಅಗತ್ಯ ಇರುವುದಿಲ್ಲ. ಅಭ್ಯರ್ಥಿಗಳಿಗೆ ಸ್ಪಷ್ಟವಾಗಿ ಕನ್ನಡ ಓದಲು ಮತ್ತು ಬರೆಯಲು ಬರುತ್ತಿರಬೇಕು. ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಹುದ್ದೆಯ ಸಂಕ್ಷಿಪ್ತ ವಿವರ:

ಜಿಲ್ಲಾಧಿಕಾರಿಗಳ ಕಾರ್ಯಾಲಯವು ದಾವಣಗೆರೆ ಜಿಲ್ಲೆಯ ಹರಿಹರ ನಗರಸಭಾ ವ್ಯಾಪ್ತಿಗೆ ಒಟ್ಟು 04 ಪೌರಕಾರ್ಮಿಕ ಹುದ್ದೆಗಳ ಭರ್ತಿಗೆ ಅವಕಾಶ ಕಲ್ಪಿಸಿದ್ದು, ಈ ಹುದ್ದೆಯು ಮೀಸಲಾತಿ ಅನ್ವಯ ಹಂಚಿಕೆ ಆಗಿದೆ ಅವುಗಳ ವಿವರ ಈ ಕೆಳಕಂಡಂತಿದೆ.

ಮೀಸಲಾತಿ ಅನ್ವಯ ಹುದ್ದೆಗಳ ಹಂಚಿಕೆಯ ವಿವರ:

  • ಸಾಮಾನ್ಯ ಅಭ್ಯರ್ಥಿಗಳಿಗೆ ಒಟ್ಟು 2 ಹುದ್ದೆಗಳನ್ನು ಹಂಚಿಕೆ ಮಾಡಲಾಗಿದ್ದು, ಇದರಲ್ಲಿ ಗ್ರಾಮೀಣ ಭಾಗದ ಅಭ್ಯರ್ಥಿಗಳಿಗೆ ಒಂದು ಹುದ್ದೆ ಹಾಗೂ ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಒಂದು ಹುದ್ದೆಯನ್ನು ಮೀಸಲಿಡಲಾಗಿದೆ.
  • ಪರಿಶಿಷ್ಟ ಜಾತಿ (SC) ಗೆ ಸೇರಿದ ಅಭ್ಯರ್ಥಿಗಳಿಗೆ ಒಂದು ಹುದ್ದೆಯನ್ನು ಹಂಚಿಕೆ ಮಾಡಲಾಗಿದೆ. ಈ ಒಂದು ಹುದ್ದೆಯು ಕಡಿಮೆ ಕಣ್ಣಿನ ದೃಷ್ಟಿಯನ್ನು ಹೊಂದಿರುವ ಅಥವಾ ಅಂಧ ಅಭ್ಯರ್ಥಿಗಳಿಗೆ ಮೀಸಲಿಡಲಾಗಿದೆ.
  • ಪ್ರವರ್ಗ 2A ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ ಒಂದು ಹುದ್ದೆಯನ್ನು ಹಂಚಿಕೆ ಮಾಡಲಾಗಿದ್ದು, ಈ ಹುದ್ದೆಯನ್ನು ಗ್ರಾಮೀಣ ಭಾಗದ ಅಭ್ಯರ್ಥಿಗಳಿಗೆ ಮೀಸಲಿಡಲಾಗಿದೆ.

ಹುದ್ದೆಗೆ ಸಂಬಂಧಿಸಿದ ಅರ್ಹತಾ ಮಾನದಂಡಗಳು:

  • ಶೈಕ್ಷಣಿಕ ಅರ್ಹತೆ:
    • ಪೌರಕಾರ್ಮಿಕ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಶಾಲಾ ಶಿಕ್ಷಣ ಅಥವಾ ಪದವಿ ಸೇರಿದಂತೆ ಯಾವುದೇ ನಿರ್ದಿಷ್ಟ ಶೈಕ್ಷಣಿಕ ಅರ್ಹತೆಯನ್ನು ಹೊಂದಿರುವ ಅಗತ್ಯ ಇರುವುದಿಲ್ಲ.
  • ಇತರೆ ಅರ್ಹತೆಗಳು:
    • ಅಭ್ಯರ್ಥಿಗಳು ಪ್ರಸ್ತುತ ಹರಿಹರ ನಗರಸಭೆಯಲ್ಲಿ ನೇರ ಪಾವತಿ ಅಥವಾ ದಿನಗೂಲಿ ಆಧಾರದ ಮೇಲೆ ಪೌರಕಾರ್ಮಿಕರಾಗಿ ಕಾರ್ಯ ನಿರ್ವಹಿಸುತ್ತಿರಬೇಕು.
    • ಅಭ್ಯರ್ಥಿಗಳಿಗೆ ಕಡ್ಡಾಯವಾಗಿ ಕನ್ನಡ ಮಾತನಾಡಲು ತಿಳಿದಿರಬೇಕು.

ವಯೋಮಿತಿ ವಿವರ:

ಹರಿಹರ ನಗರಸಭೆ ವ್ಯಾಪ್ತಿಯಲ್ಲಿ ಪೌರಕಾರ್ಮಿಕರಾಗಿ ಕಾರ್ಯನಿರ್ವಹಿಸಲು ಆಸಕ್ತಿಯನ್ನು ಹೊಂದಿರುವ ಅಭ್ಯರ್ಥಿಗಳು ಕನಿಷ್ಠ 18 ವರ್ಷದಿಂದ ಗರಿಷ್ಟ 55 ವರ್ಷ ವಯೋಮಿತಿಯನ್ನು ಹೊಂದಿರಬೇಕು.

ವಯೋಮಿತಿ ಸಡಿಲಿಕೆ ವಿವರ:

ದಾವಣಗೆರೆ ಜಿಲ್ಲಾ ಅಭಿವೃದ್ಧಿ ಇಲಾಖೆಯ ಕೆಲವು ನಿಯಮಗಳ ಅನ್ವಯ ಕೆಲವು ವರ್ಗಗಳ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಇರುತ್ತದೆ. ಇದರ ಕುರಿತು ಇನ್ನಷ್ಟು ಮಾಹಿತಿಗಾಗಿ ನೇಮಕಾತಿಯ ಅಧಿಕೃತ ಅಧಿಸೂಚನೆಯನ್ನು ಓದಿಕೊಳ್ಳಿ.

ವೇತನ ಶ್ರೇಣಿ:

ಸರ್ಕಾರದ ಕೆಲವು ನಿಯಮಗಳ ಅನುಸಾರ ಪೌರಕಾರ್ಮಿಕ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಅತ್ಯಾಕರ್ಷಕ ವೇತನವನ್ನು ನೀಡಲಾಗುತ್ತದೆ. ಅವುಗಳ ವಿವರ ಈ ಕೆಳಕಂಡಂತಿದೆ.

  • ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ₹27,000 ದಿಂದ ₹46,675 ವೇತನವನ್ನು ನಿಗದಿಪಡಿಸಲಾಗುತ್ತದೆ. ಇವುಗಳ ಜೊತೆಗೆ ಇತರೆ ಭತ್ಯೆಗಳನ್ನು ಪಡೆಯಲು ಅರ್ಹರಾಗಿರುತ್ತಾರೆ.

ಅರ್ಜಿ ಶುಲ್ಕ:

ಪೌರಕಾರ್ಮಿಕ ಹುದ್ದೆಗೆ ಅರ್ಜಿ ಸಲ್ಲಿಸುವ ಯಾವುದೇ ವರ್ಗದ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವನ್ನು ನಿಗದಿಪಡಿಸಿಲ್ಲ. ಅಭ್ಯರ್ಥಿಗಳು ಉಚಿತವಾಗಿ ದಾವಣಗೆರೆಯ ಹರಿಹರ ನಗರಸಭಾ ಕಚೇರಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ.

ಹುದ್ದೆಗೆ ಅರ್ಜಿ ಸಲ್ಲಿಸಲು ಅಗತ್ಯವಾದ ದಾಖಲೆಗಳು:

ಪೌರಕಾರ್ಮಿಕ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಈ ಕೆಳಗೆ ನೀಡಲಾದ ದಾಖಲೆಗಳನ್ನು ಹೊಂದಿರಬೇಕಾಗುತ್ತದೆ. ಅವುಗಳೆಂದರೆ,

  • ಸೇವಾ ಪ್ರಮಾಣಪತ್ರ
  • ವಯಸ್ಸಿನ ಪುರಾವೆ
  • ಜಾತಿ ಪ್ರಮಾಣಪತ್ರ
  • ಪಾಸ್ಪೋರ್ಟ್ ಅಳತೆಯ ಫೋಟೋ
  • ಬ್ಯಾಂಕ್ ಪಾಸ್ ಬುಕ್ ವಿವರ

ಅರ್ಜಿ ಸಲ್ಲಿಸುವ ವಿಧಾನ:

  • ಅಭ್ಯರ್ಥಿಗಳು ಈ ಒಂದು ಹುದ್ದೆಗೆ (DC Office Job) ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಈ ಕೆಳಗೆ ನೀಡಿರುವ ವಿಧಾನಗಳ ಮೂಲಕ ಅರ್ಜಿ ಸಲ್ಲಿಸಿ.
  • ಅಭ್ಯರ್ಥಿಗಳು ಹರಿಹರ ನಗರಸಭಾ ಕಛೇರಿಗೆ ಭೇಟಿ ನೀಡಿ ಪೌರಕಾರ್ಮಿಕ ಹುದ್ದೆಗೆ ಸಂಬಂಧಿಸಿದ ಅರ್ಜಿ ನಮೂನೆಯನ್ನು ಕೇಳಿ ಪಡೆಯಿರಿ.
  • ನಂತರ ಅಪ್ಲಿಕೇಶನ್ ಫಾರ್ಮ್ ನಲ್ಲಿ ಕೇಳಲಾದ ಎಲ್ಲಾ ವೈಯಕ್ತಿಕ ವಿವರ ಹಾಗೂ ಅನುಭವ ವಿವರವನ್ನು ಭರ್ತಿ ಮಾಡಿ.
  • ಅಭ್ಯರ್ಥಿಗಳ ವಯಸ್ಸಿನ ಪುರಾವೆ, ಅನುಭವ ಪ್ರಮಾಣಪತ್ರ ಹಾಗೂ ಮೀಸಲಾತಿ ಪ್ರಮಾಣಪತ್ರವನ್ನು ಅಪ್ಲಿಕೇಶನ್ ಫಾರ್ಮ್ ನೊಂದಿಗೆ ಲಗತ್ತಿಸಿ.
  • ನಂತರ ಎಲ್ಲಾ ಅಗತ್ಯ ದಾಖಲೆಗಳನ್ನು ಒಳಗೊಂಡ ಅರ್ಜಿಯನ್ನು ಹರಿಹರ ನಗರಸಭಾ ಪೌರಾಯುಕ್ತರ ಮೂಲಕ ಈ ಕೆಳಗೆ ನೀಡಲಾದ ವಿಳಾಸಕ್ಕೆಅರ್ಜಿ ಸಲ್ಲಿಸಿ.
“ಅಧ್ಯಕ್ಷರು, ಪೌರಕಾರ್ಮಿಕರ ನೇರ ನೇಮಕಾತಿ ಆಯ್ಕೆ ಪ್ರಾಧಿಕಾರ ಹಾಗೂ ಜಿಲ್ಲಾಧಿಕಾರಿಗಳು, ದಾವಣಗೆರೆ ಜಿಲ್ಲೆ”

ಆಯ್ಕೆ ವಿಧಾನ :

  • ಸೇವಾ ಜೇಷ್ಠತೆ: ಅಭ್ಯರ್ಥಿಗಳು ಹರಿಹರ ನಗರಸಭೆಯಲ್ಲಿ ಕನಿಷ್ಠ 2 ವರ್ಷಗಳ ಸೇವಾ ಅನುಭವವನ್ನು ಹೊಂದಿರಬೇಕು. ಹೆಚ್ಚಿನ ಸೇವಾ ಅನುಭವ ಹೊಂದಿರುವ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುತ್ತದೆ.
  • ಇಬ್ಬರು ಅಭ್ಯರ್ಥಿಗಳ ಸೇವಾ ಅವಧಿ ಒಂದೇ ಆಗಿದ್ದರೆ, ವಯಸ್ಸಿನಲ್ಲಿ ಹಿರಿಯ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.
  • ಒಂದು ವೇಳೆ ಇಬ್ಬರು ಅಭ್ಯರ್ಥಿಗಳು ಒಂದೇ ಜನ್ಮ ದಿನಾಂಕ ಹಾಗೂ ಸೇವಾ ಅನುಭವವನ್ನು ಹೊಂದಿದ್ದರೆ, ಲಾಟರಿ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.
  • ಅಭ್ಯರ್ಥಿಗಳು ಸಲ್ಲಿಸಿದ ದಾಖಲೆಗಳ ಆಧಾರದ ಮೇಲೆ ಅಭ್ಯರ್ಥಿಗಳ ಅಂತಿಮ ಪಟ್ಟಿಯನ್ನು ತಯಾರಿಸಲಾಗುತ್ತದೆ.

ಪ್ರಮುಖ ದಿನಾಂಕಗಳು:

ಅಧಿಕೃತ ಅಧಿಸೂಚನೆ ಹೊರಡಿಸಿದ ದಿನಾಂಕ 11-03-2026
ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ11-03-2026
ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ10-04-2026
DC Office Job

ಅರ್ಜಿಸಲ್ಲಿಸಲು ಪ್ರಮುಖ ಲಿಂಕುಗಳು:

ಅಧಿಕೃತ ಅಧಿಸೂಚನೆ ಲಿಂಕ್ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ವೆಬ್‌ಸೈಟ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ
DC Office Job

ಅಂತಿಮ ಮಾತು:

ದಾವಣಗೆರೆ ಜಿಲ್ಲೆಯ ಹರಿಹರ ನಗರಸಭೆಯಲ್ಲಿ ದೀರ್ಘಕಾಲದಿಂದ ಪೌರಕಾರ್ಮಿಕರಾಗಿ ಸೇವೆ ಸಲ್ಲಿಸುವ ಅಭ್ಯರ್ಥಿಗಳಿಗೆ ಈ ನೇಮಕಾತಿಯು ಅತ್ಯುತ್ತಮ ಅವಕಾಶವಾಗಿದೆ. ದಾವಣಗೆರೆ ಜಿಲ್ಲೆಯಲ್ಲಿ ಉದ್ಯೋಗವನ್ನು ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದೊಂದು ಸುವರ್ಣಾವಕಾಶವಾಗಿದೆ. ನೀವೇನಾದರೂ ಈ ಒಂದು ಹುದ್ದೆಗೆ ಅರ್ಜಿ ಸಲ್ಲಿಸಬೇಕಾದರೆ ಹರಿಹರ ನಗರಸಭಾ ಕಚೇರಿಗೆ ಭೇಟಿ ನೀಡಿ ನಿಗದಿಪಡಿಸಿದ ಕೊನೆಯ ದಿನಾಂಕ 10-04-2026 ರೊಳಗಾಗಿ ಅರ್ಜಿ ಸಲ್ಲಿಸಿ.

ಪದೇ ಪದೇ ಕೇಳಲಾಗುವ ಪ್ರಶ್ನೆಗಳು:

ಅಭ್ಯರ್ಥಿಗಳು ಈ ಒಂದು ಹುದ್ದೆಗೆ (DC Office Job) ಅರ್ಜಿ ಸಲ್ಲಿಸಬೇಕಾದರೆ ಯಾವುದೇ ನಿರ್ದಿಷ್ಟ ಶೈಕ್ಷಣಿಕ ಅರ್ಹತೆಯನ್ನು ಹೊಂದಿರುವ ಅಗತ್ಯ ಇರುವುದಿಲ್ಲ.

ಪೌರಕಾರ್ಮಿಕ ಹುದ್ದೆಗೆ (DC Office Job) ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷದಿಂದ ಗರಿಷ್ಟ 55 ವರ್ಷ ವಯೋಮಿತಿಯನ್ನು ಹೊಂದಿರಬೇಕು.

ಪೌರಕಾರ್ಮಿಕ ಹುದ್ದೆಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 10-04-2026

ಪ್ರಸ್ತುತ ಹರಿಹರ ನಗರಸಭೆಯಲ್ಲಿ ನೇರ ಪಾವತಿ ಅಥವಾ ದಿನಗೂಲಿ ಆಧಾರದ ಮೇಲೆ ಪೌರಕಾರ್ಮಿಕರಾಗಿ ಕಾರ್ಯ ನಿರ್ವಹಿಸುತ್ತಿರುವ ಅಭ್ಯರ್ಥಿಗಳು ಈ ಒಂದು ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.


ಇತರೆ ಪ್ರಮುಖ ಲಿಂಕ್ ಗಳು:

Chethana

Hello! I’m Chethana, an economics graduate with a passion for analyzing trends in technology, finance, and global news. With years of experience as a news editor, I bring data-driven insights and simplified explanations to complex topics, tech innovations, or market trends. My goal is to make information accessible and actionable for readers. Stay tuned for well-researched articles that bridge the gap between expertise and everyday understanding!

Join WhatsApp

Join Now

Join Telegram

Join Now

Leave a Comment