DRDO: ರೂ. ₹78,800 ವೇತನ, ಭರ್ಜರಿ ನೇಮಕಾತಿ 2026! ಯಾವುದೇ ಅರ್ಜಿ ಶುಲ್ಕವಿಲ್ಲದೆ ಸರ್ಕಾರಿ ಉದ್ಯೋಗಾವಕಾಶ!

March 11, 2026 5:27 AM

ಉದ್ಯೋಗಾಕಾಂಕ್ಷಿಗಳಿಗೆ ಬಂಪರ್ ಸಿಹಿಸುದ್ದಿ! ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯು 2026 ನೇ ಸಾಲಿನಲ್ಲಿ ನೂರಾರು ಆಡಳಿತಾತ್ಮಕ ಹಾಗೂ ತಾಂತ್ರಿಕ ಹುದ್ದೆಗಳ ಭರ್ತಿಗೆ ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದ್ದು, ಉದೋಗವಿಲ್ಲದೆ ಖಾಲಿ ಕುಳಿತಿರುವವರಿಗೆ ಸುವರ್ಣಾವಕಾಶ ಕಲ್ಪಿಸಿದೆ.

Join WhatsApp

Join Now

Join Telegram

Join Now

DRDO Recruitment in Kannada

ಹೌದು, ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (DRDO)ಯು ಜಂಟಿ ನಿರ್ದೇಶಕರು, ಹಿರಿಯ ಲೆಕ್ಕಾಧಿಕಾರಿ, ಆಡಳಿತಾಧಿಕಾರಿ ಸೇರಿದಂತೆ ಒಟ್ಟು 195 ಹುದ್ದೆಗಳ ನೇಮಕಾತಿಗೆ ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದ್ದು, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹರಾದ ಅಭ್ಯರ್ಥಿಗಳಿಗೆ ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಈ ಹುದ್ದೆಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಈಗಾಗಲೇ ಆರಂಭ ಗೊಂಡಿದ್ದು, ಅರ್ಜಿ ಸಲ್ಲಿಸಲು ಇನ್ನು ಕೆಲವೇ ದಿನಗಳು ಉಳಿದಿದೆ.

DRDO ದಲ್ಲಿರುವ ಆಡಳಿತಾತ್ಮಕ ಹಾಗೂ ತಾಂತ್ರಿಕ ಹುದ್ದೆಗಳಿಗೆ ಸಂಬಂಧಿಸಿದ ವಯೋಮಿತಿ ವಿವರ, ಶೈಕ್ಷಣಿಕ ಅರ್ಹತೆ, ಅರ್ಜಿ ಸಲ್ಲಿಸುವುದು ಹೇಗೆ ಎನ್ನುವ ಕುರಿತು ಮಾಹಿತಿಯನ್ನು ಈ ಕೆಳಗಿನ ಹಂತದಲ್ಲಿ ತಿಳಿದುಕೊಳ್ಳಬಹುದಾಗಿದೆ.


ಇದೇ ರೀತಿಯಲ್ಲಿ ವಿವಿಧ ಹುದ್ದೆಗಳ ಬಗೆಗಿನ ಇನ್ನಷ್ಟು ಮಾಹಿತಿಗಾಗಿ ನಮ್ಮ ವೆಬ್ ಸೈಟ್ ಮಾಧ್ಯಮ.ನೆಟ್  ಗೆ ಭೇಟಿ ನೀಡಿ.

DRDO

ಹುದ್ದೆಯ ಪರಿಚಯ:-

ನೇಮಕಾತಿ ಸಂಸ್ಥೆ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (DRDO)
ಹುದ್ದೆಯ ಹೆಸರುಜಂಟಿ ನಿರ್ದೇಶಕರು, ಹಿರಿಯ ಲೆಕ್ಕಾಧಿಕಾರಿ, ಆಡಳಿತಾಧಿಕಾರಿ ಹಾಗೂ ಇನ್ನಿತರ ಹುದ್ದೆಗಳು
ಹುದ್ದೆಗಳ ಒಟ್ಟು ಸಂಖ್ಯೆಒಟ್ಟು 195 ಹುದ್ದೆಗಳು
ಅರ್ಜಿ ಅನ್ವಯಿಸುವ ಪ್ರಕ್ರಿಯೆಆಫ್ಲೈನ್ ಮೂಲಕ
ಉದ್ಯೋಗ ಸ್ಥಳ ಬೆಂಗಳೂರು, ಕೊಚ್ಚಿ, ನವದೆಹಲಿ, ಹೈದರಾಬಾದ್, ಪುಣೆ ಹಾಗೂ ಇನ್ನಿತರ ಕೇಂದ್ರಗಳು

DRDO ಹುದ್ದೆಗಳ ಕುರಿತು ಸಂಕ್ಷಿಪ್ತ ಮಾಹಿತಿ:

ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯು ಭಾರತ ಸರ್ಕಾರದ ರಕ್ಷಣಾ ಸಚಿವಾಲಯದಲ್ಲಿ ಕಾರ್ಯ ನಿರ್ವಹಿಸುತ್ತಿದ್ದು, 2026 ನೇ ಸಾಲಿನಲ್ಲಿ 195 ಜಂಟಿ ನಿರ್ದೇಶಕರು, ಹಿರಿಯ ಲೆಕ್ಕಾಧಿಕಾರಿ, ಆಡಳಿತಾಧಿಕಾರಿ, ಖಾಸಗಿ ಕಾರ್ಯದರ್ಶಿ ಹಾಗೂ ಮಳಿಗೆ ಅಧಿಕಾರಿ ಹುದ್ದೆಗಳು ನೇಮಕಾತಿಗೆ ಅಧಿಸೂಚನೆಯನ್ನು ಹೊರಡಿಸಿದ್ದು, ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ವಿಷಯದಲ್ಲಿ ಪದವಿಯನ್ನು ಹೊಂದಿದ್ದು ಗರಿಷ್ಟ 56 ವರ್ಷ ವಯೋಮಿತಿಯನ್ನು ಮೀರಿರಬಾರದು.

ಹುದ್ದೆಯ ವಿವರ:

ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯು ಒಟ್ಟು 195 ಹುದ್ದೆಗಳ ನೇಮಕಾತಿಗೆ ಅಧಿಸೂಚನೆಯನ್ನು ಹೊರಡಿಸಿದ್ದು ಯಾವ ಯಾವ ವಿಭಾಗದಲ್ಲಿ ಎಷ್ಟೆಷ್ಟು ಹುದ್ದೆಗಳು ಖಾಲಿ ಇದೆ ಎನ್ನುವುದನ್ನು ಈ ಕೆಳಗಿನ ಹಂತದಲ್ಲಿ ತಿಳಿದುಕೊಳ್ಳೋಣ.

ಹುದ್ದೆಯ ಹೆಸರು ಹುದ್ದೆಗಳ ಸಂಖ್ಯೆ
ಖಾಸಗಿ ಕಾರ್ಯದರ್ಶಿ85 ಹುದ್ದೆಗಳು
ಹಿರಿಯ ಲೆಕ್ಕಾಧಿಕಾರಿ 46 ಹುದ್ದೆಗಳು
ಆಡಳಿತಾಧಿಕಾರಿ34 ಹುದ್ದೆಗಳು
ಮಳಿಗೆ ಅಧಿಕಾರಿ 16 ಹುದ್ದೆಗಳು
ಲೆಕ್ಕಾಧಿಕಾರಿ 08 ಹುದ್ದೆಗಳು
ಜಂಟಿ ನಿರ್ದೇಶಕರು 04 ಹುದ್ದೆಗಳು
ಜಂಟಿ ನಿರ್ದೇಶಕರು 01 ಹುದ್ದೆ
ಹೆಚ್ಚುವರಿ ಮುಖ್ಯ ನಿರ್ಮಾಣ ಇಂಜಿನಿಯರ್ 01 ಹುದ್ದೆ

ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರಬೇಕಾದ ಶೈಕ್ಷಣಿಕ ಅರ್ಹತೆ:

1. ಹಿರಿಯ ಲೆಕ್ಕಾಧಿಕಾರಿ ಹಾಗೂ ಆಡಳಿತಾತ್ಮಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು:

  • ಹಿರಿಯ ಲೆಕ್ಕಾಧಿಕಾರಿ ಹಾಗೂ ಆಡಳಿತಾಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಲ್ಲಿ ಪದವಿಯನ್ನು ಪೂರ್ಣಗೊಳಿಸಿರಬೇಕು.
  • ಹಿರಿಯ ಲೆಕ್ಕಾಧಿಕಾರಿಗಳು 3 ವರ್ಷ ಹಾಗೂ ಆಡಳಿತಾಧಿಕಾರಿಗಳು 2 ವರ್ಷ ಲೆಕ್ಕಪತ್ರ ಹಾಗೂ ಆಡಳಿತಾತ್ಮಕ ವಿಭಾಗದಲ್ಲಿ ಉದ್ಯೋಗದ ಅನುಭವವನ್ನು ಹೊಂದಿರಬೇಕು.

2. ಜಂಟಿ ನಿರ್ದೇಶಕ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು:

  • ಜಂಟಿ ನಿರ್ದೇಶಕ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಲ್ಲಿ ಪದವಿಯನ್ನು ಪೂರ್ಣಗೊಳಿಸಿರಬೇಕು.
  • ಲೆಕ್ಕ ಪತ್ರ ಹಾಗೂ ಆಡಳಿತ ವಿಭಾಗದಲ್ಲಿ 12 ವರ್ಷಗಳ ಕಾಲ ವೃತ್ತಿ ಅನುಭವವನ್ನು ಹೊಂದಿರಬೇಕು.

3. ಹೆಚ್ಚುವರಿ ಮುಖ್ಯ ನಿರ್ಮಾಣ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು:

  • ಹೆಚ್ಚುವರಿ ಮುಖ್ಯ ನಿರ್ಮಾಣ ಇಂಜಿನಿಯರ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಲೆಕ್ಟ್ರಿಕಲ್ ಅಥವಾ ಸಿವಿಲ್ ಅಥವಾ ಆರ್ಕಿಟೆಕ್ಚರ್ ಅಥವಾ ಮೆಕ್ಯಾನಿಕಲ್ ಇಂಜಿನಿಯರಿಂಗ್ ನಲ್ಲಿ ಪದವಿಯನ್ನು ಪೂರ್ಣಗೊಳಿಸಿರಬೇಕು.
  • ಜೊತೆಗೆ ಬೃಹತ್ ಸಿವಿಲ್ ಕಾಮಗಾರಿ ಯೋಜನೆಯಲ್ಲಿ 10 ವರ್ಷದ ಜವಾಬ್ದಾರಿಯುತ ಅನುಭವವನ್ನು ಹೊಂದಿರಬೇಕು.

4. ಮಳಿಗೆ ಅಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು:

  • ಮಳಿಗೆ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಲ್ಲಿ ಪದವಿಯನ್ನು ಪೂರ್ಣಗೊಳಿಸಿರಬೇಕು.
  • ಜೊತೆಗೆ ಸ್ಟೋರ್ ಕೀಪಿಂಗ್ ವಿಭಾಗದಲ್ಲಿ 3 ವರ್ಷದ ವೃತ್ತಿ ಅನುಭವವನ್ನು ಹೊಂದಿರಬೇಕು.

5. ಖಾಸಗಿ ಕಾರ್ಯದರ್ಶಿ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು:

  • ಖಾಸಗಿ ಕಾರ್ಯದರ್ಶಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕೇಂದ್ರ ಸರ್ಕಾರದ ಅಡಿಯಲ್ಲಿ ಸ್ಟೈನೋಗ್ರಾಫರ್ ಆಗಿ ಕೆಲಸ ಮಾಡುತ್ತಿರುವ ನೌಕರರಾಗಿರಬೇಕು. ಇಲ್ಲದಿದ್ದರೆ ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹರಲ್ಲ.

ವಯೋಮಿತಿ:

ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಗರಿಷ್ಠ 56 ವರ್ಷ ವಯೋಮಿತಿಯನ್ನು ಮೀರಿರಬಾರದು.

ವಯೋಮಿತಿ ಸಡಿಲಿಕೆ:

  • ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯಲ್ಲಿ ನಡೆಯುವ ನೇಮಕಾತಿ ಪ್ರಕ್ರಿಯೆಯು ನಿಯೋಜನೆ ಆಧಾರಿತ ನಡೆಯುವುದರಿಂದ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಅಭ್ಯರ್ಥಿಗಳಿಗೆ, ಕೇಂದ್ರ ಸರ್ಕಾರಿ ನೌಕರರಿಗೆ, OBC ಅಭ್ಯರ್ಥಿಗಳಿಗೆ, ಅಂಗವಿಕಲ ಅಭ್ಯರ್ಥಿಗಳಿಗೆ ಹಾಗೂ ಮಾಜಿ ಸೈನಿಕ ಅಭ್ಯರ್ಥಿಗಳಿಗೆ ನಿಯಮಾನುಸಾರ ವಯೋಮಿತಿ ಸಡಿಲಿಕೆ ಇರುತ್ತದೆ.

ಅರ್ಜಿ ಶುಲ್ಕ:

ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯ ನೇಮಕಾತಿ ಅಧಿಸೂಚನೆಯ ಪ್ರಕಾರ ಈ ಹುದ್ದೆಗಳಿಗೆ ಯಾವುದೇ ಅರ್ಜಿ ಶುಲ್ಕವನ್ನು ನಿಗದಿಪಡಿಸಿಲ್ಲ.

ವೇತನ ಶ್ರೇಣಿ:

ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅನುಗುಣವಾಗಿ ವೇತನ ಶ್ರೇಣಿಯನ್ನು ನಿಗದಿಪಡಿಸಲಾಗಿದ್ದು, ಈ ವೇತನವನ್ನು 7 ನೇ ವೇತನ ಆಯೋಗದ ಅನ್ವಯ ನಿಗದಿಪಡಿಸಲಾಗಿದೆ. ಇದರ ಕುರಿತು ಈ ಕೆಳಗೆ ವಿವರವಾದ ಮಾಹಿತಿಯನ್ನು ನೀಡಲಾಗಿದೆ.

  • ಹೆಚ್ಚುವರಿ ಮುಖ್ಯ ನಿರ್ಮಾಣ ಇಂಜಿನಿಯರ್ ಹಾಗೂ ಜಂಟಿ ನಿರ್ದೇಶಕ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳು ಪೆ ಲೆವೆಲ್ 13 ರ ಅಡಿಯಲ್ಲಿ ವೇತನವನ್ನು ಪಡೆಯಲು ಅರ್ಹರಾಗಿರುತ್ತಾರೆ. ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಮಾಸಿಕ ₹78,800 ದಿಂದ ₹2,09,200 ವರೆಗೆ ವೇತನವನ್ನು ಪಡೆಯಲು ಅರ್ಹರಾಗಿರುತ್ತಾರೆ.
  • ಮಳಿಗೆ ಅಧಿಕಾರಿ, ಆಡಳಿತಾಧಿಕಾರಿ, ಲೆಕ್ಕಾಧಿಕಾರಿ ಹಾಗೂ ಖಾಸಗಿ ಕಾರ್ಯದರ್ಶಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಪೆ ಲೆವೆಲ್ 7 ರ ಅಡಿಯಲ್ಲಿ ವೇತನವನ್ನು ನಿಗದಿಪಡಿಸಲಾಗುತ್ತದೆ. ಹಾಗೂ ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳು ಮಾಸಿಕ ₹44,900 ದಿಂದ ₹1,42,400 ವರೆಗೆ ವೇತನವನ್ನು ಪಡೆಯಲು ಅರ್ಹರಾಗಿರುತ್ತಾರೆ.
  • ಹಿರಿಯ ಲೆಕ್ಕಾಧಿಕಾರಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಪೆ ಲೆವೆಲ್ 10 ರ ಅಡಿಯಲ್ಲಿ ವೇತನ ನಿಗದಿಪಡಿಸಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ:

  • ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು DRDO ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಹುದ್ದೆಗೆ ಸಂಬಂಧಿಸಿದ ಅಪ್ಲಿಕೇಶನ್ ಫಾರ್ಮ್ ಅನ್ನು ಪಡೆದುಕೊಳ್ಳಿ.
  • ನಂತರ ಅಪ್ಲಿಕೇಶನ್ ಫಾರ್ಮ್ ನಲ್ಲಿ ಕೇಳಲಾದ ಎಲ್ಲಾ ವೈಯಕ್ತಿಕ ಹಾಗೂ ಶೈಕ್ಷಣಿಕ ವಿವರಗಳನ್ನು ಭರ್ತಿ ಮಾಡಿ.
  • ಅಭ್ಯರ್ಥಿಗಳ ಇತ್ತೀಚಿನ ಪಾಸ್ಪೋರ್ಟ್ ಅಳತೆಯ ಭಾವಚಿತ್ರವನ್ನು ಲಗತ್ತಿಸಿ.
  • ಕಳೆದ 5 ವರ್ಷಗಳ ವಾರ್ಷಿಕ ಸಾಧನ ವರದಿಯ ದೃಢೀಕರಣ ಪತ್ರವನ್ನು, ಶೈಕ್ಷಣಿಕ ಪ್ರಮಾಣಪತ್ರವನ್ನು ಹಾಗೂ ಅನುಭವ ಪ್ರಮಾಣಪತ್ರವನ್ನು ಲಗತ್ತಿಸಿ. ನಂತರ ಈ ಕೆಳಗೆ ನೀಡಲಾದ ವಿಳಾಸಕ್ಕೆ ಕಳುಹಿಸಿ.
“ಡೆಪ್ಯೂಟಿ ಡೈರೆಕ್ಟರ್, ಪರ್ಸನಲ್ ಡೈರೆಕ್ಟರೇಟ್, ರೂಮ್ ನಂಬರ್ 266, 2 ನೇ ಮಹಡಿ, DRDO ಭವನ, ರಾಜಾರ್ಜಿ ಮಾರ್ಗ, ನವದೆಹಲಿ – 110105”

ಆಯ್ಕೆವಿಧಾನ :

  • ಶಾರ್ಟ್ ಲಿಸ್ಟ್:

ಅಭ್ಯರ್ಥಿಗಳ ಶೈಕ್ಷಣಿಕ ಅರ್ಹತೆ ಹಾಗೂ ಕೆಲಸದ ಅನುಭವಗಳ ಆಧಾರದ ಮೇಲೆ ಅಭ್ಯರ್ಥಿಗಳ ಶಾರ್ಟ್ ಲಿಸ್ಟ್ ತಯಾರಿಸಲಾಗುತ್ತದೆ.

  • ವೈಯಕ್ತಿಕ ಸಂದರ್ಶನ:

ನಂತರ ಶಾರ್ಟ್ ಲಿಸ್ಟ್ ಅಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ವೈಯಕ್ತಿಕ ಸಂದರ್ಶನಕ್ಕೆ ಕರೆಯಲಾಗುತ್ತದೆ. ಅಥವಾ ನೇರ ಆಯ್ಕೆ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.


ಪ್ರಮುಖ ದಿನಾಂಕಗಳು:

ಅಧಿಕೃತ ಅಧಿಸೂಚನೆ ಹೊರಡಿಸಿದ ದಿನಾಂಕ 12-02-2026
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ12-02-2026
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕಅಧಿಸೂಚನೆಯನ್ನು ಹೊರಡಿಸಿದ 45 ದಿನಗಳ ಒಳಗೆ ಅರ್ಜಿ ಸಲ್ಲಿಸಲು ಅವಕಾಶ

ಅರ್ಜಿಸಲ್ಲಿಸಲು ಪ್ರಮುಖ ಲಿಂಕುಗಳು:

ಅಧಿಕೃತ ಅಧಿಸೂಚನೆ ಲಿಂಕ್ ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ವೆಬ್‌ಸೈಟ್ ಲಿಂಕ್ ಇಲ್ಲಿ ಕ್ಲಿಕ್ ಮಾಡಿ

ತೀರ್ಮಾನ:

ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯು (DRDO) 195 ಹುದ್ದೆಗಳ ಭರ್ತಿಗೆ ಅವಕಾಶ ಕಲ್ಪಿಸಲಾಗಿದ್ದು, ಈ ಹುದ್ದೆಗಳಿಗೆ ನೇಮಕಗೊಂಡ ಅಭ್ಯರ್ಥಿಗಳಿಗೆ ಅತ್ಯಾಕರ್ಷಕ ವೇತನವನ್ನು ನಿಗದಿಪಡಿಸಲಾಗಿದೆ. ನೀವೇನಾದರೂ ಈ ಹುದ್ದೆಗೆ ಅರ್ಜಿ ಸಲ್ಲಿಸಬೇಕಾದರೆ ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾಗುತ್ತದೆ. DRDO ದಲ್ಲಿನ ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಭಾರತದಾದ್ಯಂತ ಯಾವುದೇ ಕೇಂದ್ರಗಳಲ್ಲಿ ಉದ್ಯೋಗ ಮಾಡಲು ಸಿದ್ಧರಿರಬೇಕು.

ಪದೇ ಪದೇ ಕೇಳಲಾಗುವ ಪ್ರಶ್ನೆಗಳು:

DRDO ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿ ಮಾಡುವ ಅಗತ್ಯ ಇರುವುದಿಲ್ಲ.

DRDO ದಲ್ಲಿ ಒಟ್ಟು 195 ಹುದ್ದೆಗಳು ಖಾಲಿ ಇದೆ.

DRDO ಸಂಸ್ಥೆಯು ನೇಮಕಾತಿಗೆ ಅಧಿಕೃತ ಅಧಿಸೂಚನೆ ಹೊರಡಿಸಿದ ನಂತರ 45 ಗಳ ಒಳಗೆ ಅರ್ಜಿಸಬೇಕಾಗುತ್ತದೆ.


ಇತರೆ ಪ್ರಮುಖ ಲಿಂಕ್ ಗಳು:

Chethana

Hello! I’m Chethana, an economics graduate with a passion for analyzing trends in technology, finance, and global news. With years of experience as a news editor, I bring data-driven insights and simplified explanations to complex topics, tech innovations, or market trends. My goal is to make information accessible and actionable for readers. Stay tuned for well-researched articles that bridge the gap between expertise and everyday understanding!

Join WhatsApp

Join Now

Join Telegram

Join Now

Leave a Comment