
ಸರ್ಕಾರದಿಂದ ವಿದ್ಯಾರ್ಥಿಗಳಿಗೆ ಸಂತಸದ ಸುದ್ದಿ! 11ನೇ ಹಾಗೂ 12ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ ಟಾಪ್ ಯೋಜನೆ. ನೀವು ಈ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುತ್ತೀರಾ? ಹಾಗಿದ್ದರೆ ಇಂದೇ ಅರ್ಜಿ ಸಲ್ಲಿಸಿ ಅರ್ಜಿ ಸಲ್ಲಿಸೋಕೆ ನಾನು ಸಹಾಯ ಮಾಡ್ತೀನಿ.
Free Laptop Scheme In Kannada
ಸದ್ಯದಲ್ಲೇ, PUC ಪರೀಕ್ಷೆಗಳು ನಡೆಯಲಿದ್ದು, ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಪೂರಕವಾದ ವಿಷಯಗಳ ನೋಟ್ ಪುಸ್ತಕಗಳು, ಮಾದರಿ ಪ್ರಶ್ನೆ ಪತ್ರಿಕೆಗಳು ಹೀಗೆ ಇತರೆ ಮಾಹಿತಿಗಳನ್ನು ಪಡೆಯಲು ಲ್ಯಾಪ್ ಟಾಪ್ ಹೆಚ್ಚು ಸಹಾಯಕಾರಿಯಾಗುತ್ತದೆ.
ವಿದ್ಯಾರ್ಥಿಗಳು ತಾಂತ್ರಿಕ ಶಿಕ್ಷಣವನ್ನು ಪಡೆದುಕೊಳ್ಳಬೇಕಾದರೆ ಲ್ಯಾಪ್ ಟಾಪ್ ಮುಖ್ಯವಾಗಿರುತ್ತದೆ. ಬಡ ಕುಟುಂಬಗಳ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ದುಬಾರಿಯ ಲ್ಯಾಪ್ ಟಾಪ್ ಕೊಳ್ಳಲು ಸಾಧ್ಯವಾಗುವುದಿಲ್ಲ. ಇಂತಹವರಿಗಾಗಿಯೇ ಸರ್ಕಾರವು ಉಚಿತ ಲ್ಯಾಪ್ ಟಾಪ್ ಯೋಜನೆಯನ್ನು ಜಾರಿಗೆ ತಂದಿದೆ. ಈ ಯೋಜನೆಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ಈಗಾಗಲೇ ಪ್ರಾರಂಭ ಗೊಂಡಿದ್ದು, ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿ ಈ ಯೋಜನೆಯ ಲಾಭವನ್ನು ಪಡೆದುಕೊಳ್ಳಿ.
ಯೋಜನೆಯ ವಿಮರ್ಶೆ
| ಯೋಜನೆಯ ಹೆಸರು | ಉಚಿತ ಲ್ಯಾಪ್ ಟಾಪ್ ಯೋಜನೆ |
| ಅರ್ಹ ಫಲಾನುಭವಿಗಳು | ಆರ್ಥಿಕ ವಾಗಿ ದುರ್ಬಲರಾದ ವಿದ್ಯಾರ್ಥಿಗಳು |
| ಅರ್ಜಿ ಸಲ್ಲಿಸುವ ರಾಜ್ಯ | ಕರ್ನಾಟಕ |
| ಅರ್ಜಿ ಸಲ್ಲಿಸುವ ವಿಧಾನ | ಆನ್ಲೈನ್ |
ಯೋಜನೆಯ ಕುರಿತು:
ಕರ್ನಾಟಕ ಸರ್ಕಾರವು ಸಮಾಜ ಕಲ್ಯಾಣ ಇಲಾಖೆಯ ಅಡಿಯಲ್ಲಿ ಉಚಿತ ಲ್ಯಾಪ್ ಟಾಪ್ ಯೋಜನೆಯನ್ನು ಜಾರಿಗೊಳಿಸಿದ್ದು, ಆರ್ಥಿಕವಾಗಿ ದುರ್ಬಲರಾದ ವಿದ್ಯಾರ್ಥಿಗಳಿಗೆ ಯಾವುದೇ ಖರ್ಚಿಲ್ಲದೆ ಉಚಿತವಾಗಿ ಲ್ಯಾಪ್ ಟಾಪ್ ನೀಡುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ. 10ನೇ ತರಗತಿಯಲ್ಲಿ ಉತ್ತೀರ್ಣರಾಗಿ ಪದವಿ ಪೂರ್ವ ಶಿಕ್ಷಣವನ್ನು ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ ಈ ಯೋಜನೆಯ ಲಾಭವನ್ನು ಪಡೆದುಕೊಳ್ಳಲು ಅವಕಾಶವನ್ನು ಕಲ್ಪಿಸಲಾಗಿದೆ.
ಯೋಜನೆಯ ಮುಖ್ಯ ಗುರಿ:
- ಪ್ರತಿಭಾವಂತ ವಿದ್ಯಾರ್ಥಿಗಳು ತಾಂತ್ರಿಕ ಶಿಕ್ಷಣ ಪಡಿಯುವುದರಿಂದ ವಂಚಿತರಾಗುವುದನ್ನು ತಡೆಯುವುದು.
- ಹತ್ತನೇ ತರಗತಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಪಡೆಯುವಂತೆ ಪ್ರೇರೇಪಿಸುವುದು.
- ನಗರ ಪದೇಶಗಳಲ್ಲಿನ ವಿದ್ಯಾರ್ಥಿಗಳಿಗೆ ಸುಲಭವಾಗಿ ಲಭ್ಯವಾಗುವ ತಂತ್ರಜ್ಞಾನವು, ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಲಭ್ಯವಾಗುವಂತೆ ಮಾಡುವುದು.
- ವಿದ್ಯಾರ್ಥಿಗಳು ಡಿಜಿಟಲ್ ಸಾಧನಗಳ ಮೂಲಕ ಪಠ್ಯಕ್ರಮವನ್ನು ಅನುಸರಿಸಲು ಅವಕಾಶ ಕಲ್ಪಿಸುವುದು.
- ಡಿಜಿಟಲ್ ಸಾಕ್ಷರತೆ ಮತ್ತು ತಾಂತ್ರಿಕ ಕೌಶಲ್ಯವನ್ನು ಪ್ರೋತ್ಸಾಹಿಸುವುದು.
ಯೋಜನೆಯ ಪ್ರಯೋಜನ:
- ವಿದ್ಯಾರ್ಥಿಗಳಿಗೆ ಅಗತ್ಯವಾದ ಶೈಕ್ಷಣಿಕ ವಿಡಿಯೋಗಳನ್ನು ಹಾಗೂ ಆನ್ಲೈನ್ ಕೋರ್ಸ್ ಗಳನ್ನು ಯಾವ ಸಮಯದಲ್ಲಿ ಬೇಕಾದರೂ ವೀಕ್ಷಿಸಬಹುದು.
- ಈ ಯೋಜನೆಯಿಂದಾಗಿ ವಿದ್ಯಾರ್ಥಿಗಳು ಈಗಿನಿಂದಲೇ ತಂತ್ರಜ್ಞಾನದ ಕುರಿತು ಒಂದಿಷ್ಟು ಜ್ಞಾನವನ್ನು ಪಡೆದುಕೊಳ್ಳುತ್ತ ಭವಿಷ್ಯದ ವೃತ್ತಿ ಜೀವನಕ್ಕೆ ಸಿದ್ಧರಾಗಬಹುದು.
- ವಿದ್ಯಾರ್ಥಿಗಳು ಆನ್ಲೈನ್ ಸಂಪನ್ಮೂಲಗಳನ್ನು ಬಳಸಿಕೊಂಡು ಸ್ಪರ್ಧಾತ್ಮಕ ಪರೀಕ್ಷೆಗೆ ಸಿದ್ಧತೆ ಮಾಡಿಕೊಳ್ಳುವುದು.
ಅರ್ಹತಾ ಮಾನದಂಡ:
- ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು ಕರ್ನಾಟಕ ಖಾಯಂ ನಿವಾಸಿಯಾಗಿರಬೇಕು.
- ಮಾನ್ಯತೆ ಪಡೆದ ಸರ್ಕಾರಿ ಅಥವಾ ಅನುದಾನಿತ ಶಾಲೆಯಲ್ಲಿ 10 ನೇ ತರಗತಿ ಉತ್ತೀರ್ಣರಾಗಿರಬೇಕು.
- ಹತ್ತನೇ ತರಗತಿಯಲ್ಲಿ ಕನಿಷ್ಠ 75% ಅಂಕವನ್ನು ಗಳಿಸಿರಬೇಕು.
- ಕುಟುಂಬದ ವಾರ್ಷಿಕ ಆದಾಯವು ನಿಗದಿತ ಮಿತಿಯನ್ನು ಮೀರಿರಬಾರದು.
- ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪದವಿ ಪೂರ್ವ ಶಿಕ್ಷಣವನ್ನು ಪಡೆದುಕೊಳ್ಳುತಿರಬೇಕು.
ಅಗತ್ಯ ದಾಖಲೆಗಳು:
- ಆಧಾರ್ ಕಾರ್ಡ್
- ಪಾಸ್ಪೋರ್ಟ್ ಅಳತೆಯ ಭಾವಚಿತ್ರ
- ಆದಾಯ ಪ್ರಮಾಣಪತ್ರ
- ಹತ್ತನೇ ತರಗತಿ ಅಂಕ ಪಟ್ಟಿ
- ನಿವಾಸ ಪುರಾವೆ
- ಕಾಲೇಜು ದಾಖಲಾತಿ ಪ್ರಮಾಣಪತ್ರ
- ಘೋಷಣಾ ಪ್ರಮಾಣ ಪತ್ರವನ್ನು ಹೊಂದಿರಬೇಕು
ಅರ್ಜಿ ಸಲ್ಲಿಸುವ ಹಂತಗಳು:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಲ್ಲಾ ಅಗತ್ಯ ದಾಖಲೆಗಳೊಂದಿಗೆ ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಕೇಳಿರುವ ಎಲ್ಲಾ ಸಂಪೂರ್ಣವಾದ ಮಾಹಿತಿಯನ್ನು ಭರ್ತಿ ಮಾಡಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸುವ ವಿಧಾನ:
- ಅರ್ಹ ಮತ್ತು ಆಸಕ್ತ ವಿದ್ಯಾರ್ಥಿಗಳು ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅರ್ಜಿ ನಮೂನೆಯನ್ನು ಪಡೆದುಕೊಳ್ಳಿ.
- ಅಲ್ಲಿ ಕೊಟ್ಟಿರುವ ಸಂಪೂರ್ಣವಾದ ಮಾಹಿತಿಯನ್ನು ಓದಿಕೊಂಡು ವಯಕ್ತಿಕ ವಿವರವನ್ನು ಸರಿಯಾಗಿ ಭರ್ತಿಮಾಡಿ
- ಅಗತ್ಯ ದಾಖಲೆಗಳನ್ನು ಆಪ್ಲೋಡ್ ಮಾಡಿ ಅರ್ಜಿಯನ್ನು ಸಲ್ಲಿಸಿ.
- ಭವಿಷ್ಯದ ಉಲ್ಲೇಖಕ್ಕಾಗಿ ಅರ್ಜಿ ಪ್ರತಿಯನ್ನು ಪ್ರಿಂಟ್ ಔಟ್ ತೆಗೆದುಕೊಳ್ಳಿ.
ಪ್ರಮುಖ ಲಿಂಕುಗಳು:
| ಅಧಿಕೃತ ವೆಬ್ಸೈಟ್ | ಇಲ್ಲಿ ಕ್ಲಿಕ್ ಮಾಡಿ |
| ಆನ್ ಲೈನ್ ಮುಖಾಂತರ ಅರ್ಜಿ ಸಲ್ಲಿಸಲು | ಇಲ್ಲಿ ಕ್ಲಿಕ್ ಮಾಡಿ |
ಅಂತಿಮ ಮಾತು:
ಕರ್ನಾಟಕ ಸರ್ಕಾರವು ಆರ್ಥಿಕವಾಗಿ ದುರ್ಬಲರಾಗಿರುವ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತವಾಗಿ ಲ್ಯಾಪ್ ಟಾಪ್ ನೀಡಲು ಮುಂದಾಗಿದ್ದು, ಅರ್ಜಿ ಸಲ್ಲಿಸುವ ಪ್ರಕ್ರಿಯೆ ಈಗಾಗಲೇ ಪ್ರಾರಂಭಗೊಂಡಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿತ ದಿನಾಂಕದೊಳಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ.










